ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪೇಪರ್ ಶಿಫಾರಸು – ಡಿಕೆ ಶಿವಕುಮಾರ್ ಸ್ಪಷ್ಟನೆ
- Kudla Info
- 3 days ago
- 1 min read

ಬೆಂಗಳೂರು, ಸೆಪ್ಟೆಂಬರ್ 5: ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ಮೂಲಕ ನಡೆಸಲು ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ನೀಡಿರುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. “ಇದು ಸರ್ಕಾರದ ರಾಜಕೀಯ ನಿರ್ಧಾರ. ನಾವು ನಮ್ಮ ಬ್ಯಾಲೆಟ್ ವ್ಯವಸ್ಥೆಯ ಮೇಲೆ ನಂಬಿಕೆ ಇಟ್ಟಿದ್ದೇವೆ. ಸರ್ಕಾರಕ್ಕೆ ಶಿಫಾರಸು ಮಾಡುವ ಅಧಿಕಾರವಿದೆ, ಆಯೋಗವೇ ತೀರ್ಮಾನ ಕೈಗೊಳ್ಳುತ್ತದೆ. ಬಿಜೆಪಿ ಸರ್ಕಾರವೇ ತಿದ್ದುಪಡಿ ಪಾಸು ಮಾಡುವಾಗ ‘ಇವಿಎಂ ಅಥವಾ ಬ್ಯಾಲೆಟ್’ ಎರಡೂ ಆಯ್ಕೆಗಳು ಇರಲಿ ಎಂದು ಬರೆದಿತ್ತು. ಹೀಗಾಗಿ ನಾವು ಬ್ಯಾಲೆಟ್ ಆಯ್ಕೆ ಮಾಡಿಕೊಂಡಿದ್ದೇವೆ. ಇದರಲ್ಲಿ ತಪ್ಪೇನಿದೆ? ತಪ್ಪೇನೂ ಇಲ್ಲ” ಎಂದು ಅವರು ಹೇಳಿದ್ದಾರೆ.
Comments