ಮಂಗಳೂರಿನಲ್ಲಿ ಸೆ.16ರಂದು ಕೆಂಪು ಕಲ್ಲು ಸಮಸ್ಯೆ ವಿರುದ್ಧ ಬಿಜೆಪಿ ಧರಣಿ
- Kudla Info

- Sep 7
- 1 min read

ಮಂಗಳೂರು, ಸೆಪ್ಟೆಂಬರ್ 7: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಹಾಗೂ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆಪ್ಟೆಂಬರ್ 16ರಂದು ಮಂಗಳೂರು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ಬೃಹತ್ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಕೆಂಪು ಕಲ್ಲಿನ ಗಣಿಗಾರಿಕೆಗೆ ಅವಲಂಬಿತರಾಗಿರುವ ಕಾರ್ಮಿಕರು ಹಾಗೂ ಕಲ್ಲು ಸಾಗಾಟದ ವಾಹನ ಮಾಲೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಸರ್ಕಾರ ಕಳೆದ ಮೂರು ತಿಂಗಳಿನಿಂದ ಸಮಸ್ಯೆ ಬಗೆಹರಿಸುವುದಾಗಿ ಸುಳ್ಳು ಭರವಸೆ ನೀಡುತ್ತಾ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದ ಅವರು, ಕಾಂಗ್ರೆಸ್ ಸರ್ಕಾರದ ಈ ಜನವಿರೋಧಿ ಹಾಗೂ ಕಾರ್ಮಿಕ ವಿರೋಧಿ ನಿಲುವು ಖಂಡಿಸಿ ಬೀದಿಗಿಳಿದು ಹೋರಾಟ ನಡೆಸಲು ಬಿಜೆಪಿ ನಿರ್ಧರಿಸಿದೆ ಎಂದು ಸ್ಪಷ್ಟಪಡಿಸಿದರು.








Comments