ಮಂಗಳೂರಿನ ದೇರೆಬೈಲ್‌ನಲ್ಲಿ ಟೆಕ್ ಪಾರ್ಕ್ ನಿರ್ಮಾಣಕ್ಕೆ ಸಚಿವ ಸಂಪುಟದ ಅನುಮೋದನೆ
- Kudla Info

- Oct 10
- 1 min read

ಮಂಗಳೂರು: ರಾಜ್ಯ ಸಚಿವ ಸಂಪುಟವು ಮಂಗಳೂರಿನ ದೇರೆಬೈಲ್ ಬ್ಲೂಬೆರ್ರಿ ಹಿಲ್ಸ್ ರಸ್ತೆಯಲ್ಲಿನ 3.285 ಎಕರೆ ಪ್ರದೇಶವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಆಗಿ ಅಭಿವೃದ್ಧಿಪಡಿಸಲು ಅನುಮೋದನೆ ನೀಡಿದೆ. ಮಾಹಿತಿ ತಂತ್ರಜ್ಞಾನ ಮತ್ತು ಜೈವ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬ್ಲೂಬೆರ್ರಿ ಹಿಲ್ಸ್ ರಸ್ತೆಯ ಸರ್ವೇ ನಂ.129 ಮತ್ತು 113ರಲ್ಲಿ ಟೆಕ್ ಪಾರ್ಕ್ ನಿರ್ಮಿಸಲು ವಿನ್ಯಾಸ, ನಿರ್ಮಾಣ, ಹಣಕಾಸು, ನಿರ್ವಹಣೆ ಮತ್ತು ಹಸ್ತಾಂತರ (DBFOT) ಮಾದರಿಯಲ್ಲಿ ಯೋಜನೆ ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ. ಈ ಯೋಜನೆ ಮಂಗಳೂರಿನಲ್ಲಿ ಐಟಿ ಮತ್ತು ವಾಣಿಜ್ಯ ವಲಯದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.








Comments