ಸರ್ಕಾರಿ ಸ್ಥಳದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳು ನಿರ್ಬಂಧಿಸುವ ಬಗ್ಗೆ ಪರಿಶೀಲನೆಗೆ ಸೂಚನೆ: ಸಿಎಂ ಸಿದ್ದರಾಮಯ್ಯ
- Kudla Info

- Oct 13
- 1 min read

ಆರ್‌ಎಸ್‌ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪತ್ರ ಬರೆದಿದ್ದಾರೆ.
ಸರ್ಕಾರಿ ಸ್ಥಳದಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.







Comments