top of page

ದಸರಾ ಉಡುಗೊರೆ: ನಂದಿನಿ ಉತ್ಪನ್ನಗಳ ಬೆಲೆ ಇಳಿಕೆ

  • Writer: Kudla Info
    Kudla Info
  • Sep 21
  • 1 min read
ree

ಬೆಂಗಳೂರು, ಸೆಪ್ಟೆಂಬರ್ 20: ಕರ್ನಾಟಕ ಮಿಲ್ಕ್ ಫೆಡರೇಷನ್‌ (ಕೆಎಂಎಫ್) ನಂದಿನಿ ಹಾಲು ಉತ್ಪನ್ನಗಳ ಬೆಲೆಯಲ್ಲಿ ಇಳಿಕೆ ಮಾಡುವುದಾಗಿ ಘೋಷಿಸಿದ್ದು, ಇದನ್ನು ಗ್ರಾಹಕರಿಗೆ ದಸರಾ ಉಡುಗೊರೆಯಾಗಿ ಪರಿಗಣಿಸಲಾಗಿದೆ. ಸೆಪ್ಟೆಂಬರ್ 22ರಿಂದ ಹೊಸ ದರಗಳು ಜಾರಿಗೆ ಬರಲಿದ್ದು, ಇದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸರಕು ಮತ್ತು ಸೇವಾ ತೆರಿಗೆ (GST) ಹಂಚಿಕೆ ತಿದ್ದುಪಡಿಯ ಹಿನ್ನೆಲೆಯಲ್ಲಿದೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ, ಈ ಬೆಲೆ ಇಳಿಕೆ ನಂದಿನಿ ಹಾಲು ಉತ್ಪನ್ನಗಳಿಗೆ ಮಾತ್ರ ಅನ್ವಯವಾಗಲಿದ್ದು, ಹಾಲು ಮತ್ತು ಮೊಸರಿನ ದರಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲವೆಂದು ಸ್ಪಷ್ಟಪಡಿಸಿದರು.

 
 
 

Comments


bottom of page