ರಾಷ್ಟ್ರೀಯ ಹೆದ್ದಾರಿ ದುರಸ್ತಿ ವಿಳಂಬ: ತುರ್ತು ಸಭೆ ನಡೆಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್!
- Kudla Info

- Sep 11
- 1 min read

ರಾಷ್ಟ್ರೀಯ ಹೆದ್ದಾರಿ 66 ರ ವ್ಯಾಪ್ತಿಯ ಸುರತ್ಕಲ್ - ಬಿ.ಸಿ ರೋಡ್ ಪೋರ್ಟ್ ಸಂಪರ್ಕ ರಸ್ತೆಯ ನಿರ್ವಹಣೆ ಕಾಮಗಾರಿಯ ಪ್ರಗತಿ ಪರಿಶೀಲನೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಮಹಾನಗರ ಪಾಲಿಕೆ ಅಧಿಕಾರಿಗಳು, ಪೊಲೀಸ್ ಇಲಾಖೆ ಹಾಗೂ ಗುತ್ತಿಗೆದಾರರ ನಡುವೆ ಸಮನ್ವಯ ಸಾಧಿಸಲು ಮಾನ್ಯ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಸಭೆ ನಡೆಯಿತು.
ಮಾಧ್ಯಮದೊಂದಿಗೆ ಮಾತನಾಡುತ್ತಾ, ಸಾರ್ವಜನಿಕರ ಆಕ್ರೋಶದಲ್ಲಿ ನಿಜಾಂಶವಿದೆ, ಈ ರಸ್ತೆಯ ನಿರ್ವಹಣೆಗೆ ದೊಡ್ಡ ಸವಾಲಿದೆ ಸೂಕ್ತ ಕ್ರಮ ಕಂಡುಕೊಳ್ಳಲು ನನ್ನ ಪ್ರಯತ್ನ ಮುಂದುವರೆದಿದೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು.
ಈ ಸಭೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ನಗರ ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹಾಗೂ ವಿವಿಧ ಇಲಾಖೆಗಳ ಪ್ರಮುಖರು ಉಪಸ್ಥಿತರಿದ್ದರು.







Comments