ದಸರಾ ಉದ್ಘಾಟನೆ ಕುರಿತ ಅರ್ಜಿ ತಿರಸ್ಕರಿಸಿದ ಹೈಕೋರ್ಟ್!
- Kudla Info

- Sep 15
- 1 min read

ಮೈಸೂರು ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಶ್ತಾಕ್ ಅವರನ್ನು ಆಹ್ವಾನಿಸಿರುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅನೇಕ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ. “ಭಿನ್ನ ಧರ್ಮದ ವ್ಯಕ್ತಿಯನ್ನು ದಸರಾ ಉದ್ಘಾಟನೆಗೆ ಆಹ್ವಾನಿಸುವುದು ಅರ್ಜಿದಾರರ ಕಾನೂನುಬದ್ಧ ಅಥವಾ ಸಂವಿಧಾನಿಕ ಹಕ್ಕುಗಳಿಗೆ ಧಕ್ಕೆ ತರುವುದಿಲ್ಲ” ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಇದರಿಂದ ದಸರಾ ಉದ್ಘಾಟನೆಗೆ ಸಂಬಂಧಿಸಿದ ವಿವಾದಕ್ಕೆ ತೆರೆ ಬಿದ್ದಂತಾಗಿದೆ






Comments