ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಮೆಂಟ್: ಮುಖ್ಯಮಂತ್ರಿ ಸಿದ್ದರಾಮಯ್ಯ
- Kudla Info

- Sep 22
- 1 min read

ಮಂಗಳೂರು: ಅಂತರರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಮೆಂಟ್-2025 ತಯಾರಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿ, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಸಂಯುಕ್ತವಾಗಿ ಅಕ್ಟೋಬರ್ 27ರಿಂದ ನವೆಂಬರ್ 2ರವರೆಗೆ ಉರ್ವ ಇಂಡೋರ್ ಸ್ಟೇಡಿಯಂನಲ್ಲಿ ಈ ಸ್ಪರ್ಧೆ ನಡೆಯಲಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಉದ್ಘಾಟನೆ ನಡೆಯುವ ಸಾಧ್ಯತೆ ಇದೆ. ಟೂರ್ನಮೆಂಟ್ ಯಶಸ್ವಿಗೆ ಮುಖ್ಯಮಂತ್ರಿಗಳು 1 ಕೋಟಿ ರೂ. ಮಂಜೂರು ಮಾಡಿದ್ದಾರೆ. 450ಕ್ಕೂ ಹೆಚ್ಚು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಆಟಗಾರರು ಪಾಲ್ಗೊಳ್ಳಲಿರುವ ಈ ಮಹತ್ವದ ಕಾರ್ಯಕ್ರಮ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ನಡೆಯುತ್ತಿರುವುದರಿಂದ, ಎಲ್ಲಾ ಇಲಾಖೆಗಳು ಕೈಜೋಡಿಸಿ ಸಕಲ ಸಿದ್ಧತೆ ನಡೆಸಬೇಕೆಂದು ಸಚಿವರು ತಿಳಿಸಿದರು. ಉರ್ವಾ ಇಂಡೋರ್ ಸ್ಟೇಡಿಯಂನಲ್ಲಿನ ಬಾಕಿ ಉಳಿದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.



Comments