ಮದ್ದೂರು: ಗಣೇಶ ಮೆರವಣಿಗೆಯಲ್ಲಿ ಕಲ್ಲು ತೂರಾಟ – ಪರಿಸ್ಥಿತಿ ಉದ್ವಿಗ್ನ
- Kudla Info

- Sep 8
- 1 min read

ಮದ್ದೂರಿನ ರಾಮ್ ರಹೀಮ್ ನಗರದಲ್ಲಿ ಗಣೇಶ ಮೆರವಣಿಗೆಯ ವೇಳೆ ಮಸೀದಿಯಿಂದ ಕಲ್ಲು ತೂರಾಟ ನಡೆದ ಆರೋಪ ಕೇಳಿಬಂದಿದ್ದು, ಘಟನೆ ಸ್ಥಳದಲ್ಲಿ ಭಾರೀ ಉದ್ವಿಗ್ನತೆ ಸೃಷ್ಟಿಸಿದೆ. ಪೊಲೀಸರೊಂದಿಗೆ ಪ್ರತಿಭಟನಾಕಾರರ ನಡುವೆ ತಳ್ಳಾಟ ಉಂಟಾದಾಗ ಕೆಲ ಕಿಡಿಗೇಡಿಗಳು ಮತ್ತಷ್ಟು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ನಿಯಂತ್ರಣ ತಪ್ಪದಂತೆ ಪೊಲೀಸರು ಲಾಠಿ ಚಾರ್ಜ್ ಮಾಡಿ ೨೧ ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ಬಳಿಕ ಯುವಕರ ಗುಂಪು ರಸ್ತೆಯಲ್ಲೇ ಕುಳಿತು "ಜೈ ಶ್ರೀರಾಮ್" ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಇನ್ನಷ್ಟು ಉದ್ವಿಗ್ನತೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಚರ್ಚೆ ನಡೆಸಿ, ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.






Comments